November 8, 2008

ಬಾಲ ದಾರಿಯಲ್ಲಿ ಸೂರ್ಯ ಜಾರಿಹೋದ

ಬೀದೀಲಿ ಬಿದ್ದೋರು, ಸದ್ದಿಲ್ಲದೇ ಇದ್ದೋರು, ಒಳಗೊಳಗೇ ಅತ್ತೋರು ನನ್ನ ಜನಗಳು…
`ನನ್ನ ಜನಗಳು’ ಎಂಬ ಸಿದಲಿಂಗಯ್ಯ ಅವರ ಕವಿತೆಯಲ್ಲಿ ಬರುವ ಮೇಲ್ಕಂಡ ಸಾಲಲ್ಲಿ ಇರುವ ಸಂಕಟ ಅಸಾಧಾರಣವಾದುದು. `ಸ್ಲಂ ಬಾಲಾ’ ಚಿತ್ರದಲ್ಲೂ ಆ ವೇದನೆ, ಸಂಕಟ ಇದೆ. `ಸೈಜುಗಲ್ಲು ಹೊತ್ತೋರು’ ದಲಿತರಾದರೆ ಮಂತ್ರಿಗಳ ಸಾಮ್ರಾಜ್ಯಕ್ಕೆ `ಸೈಜುಗಲ್ಲಾಗಿ’ ಹೋಗುವವ ಸ್ಲಂ ಬಾಲಾ. ಅವರ ರಾಜಕೀಯ ಹಾದಿಯನ್ನು ವಿರೋದಿಗಳಿಂದ ಮುಕ್ತ ಮಾಡುತ್ತಾ, ತನ್ನ `ದೊಡ್ಡೋರ’ ಉದ್ದಾರಕ್ಕಾಗಿ ತನ್ನ ಸರ್ವಸ್ವವನ್ನೂ ಬಲಿ ಕೊಡುತ್ತಾ, ಅವರ ಚುನಾವಣಾ ಸಾಫಲ್ಯಕ್ಕಾಗಿ ಕೊಲೆಗಿಲೆ ಮಾಡುತ್ತಾ ಬಾಲಾ ಬೆಳೆಯುತ್ತಾನೆ. [...]