November 15, 2008

ನೋವುಗಳ ದಾರದಲಿ ಸುರಿದ ಮುತ್ತು

ಯುದ್ಧ- ಶಾಂತಿಯ ವಿರುದ್ಧದ ಪದ. ಯುದಕ್ಕೆ ಮೊದಲು ಉತ್ಸಾಹ, ನಡೆದಾದ ಮೇಲೆ ಅನಾಥ ಪ್ರಜ್ಞೆ. ಈಗ ಜಗತ್ತು ಯಾವುದೇ ಘೋಷಿತ ಯುದ್ಧದಿಂದ ಬಳಲುತ್ತಿಲ್ಲವಾದರೂ ನಡೆಯುತ್ತಿರುವ ಜಗತ್ತಿನ ಪ್ರತಿ ವಿಪ್ಲವಗಳೂ ಒಂದು ರೀತಿಯಲ್ಲಿ ಯುದ್ಧದ ರೂಪವೇ ಆಗಿ ಕಾಣುತ್ತಿವೆ.
ಯುದ್ಧಾನಂತರದ ಕುರುಕ್ಷೇತ್ರದ ಕುರಿತು ಕುವೆಂಪು `ಸ್ಮಶಾನ ಕುರುಕ್ಷೇತ್ರ’ ಬರೆದರು. ಜಗತ್ತಿನ ಯಾವುದೇ ಯುದ್ಧ ಮುಗಿಯಲಿ, ಅಲ್ಲಿ ನಮಗೆ ಕಾಣುವುದು `ಸ್ಮಶಾನ ಕುರುಕ್ಷೇತ್ರ’. ಆದರೆ ಜಗತ್ತು ಎಷ್ಟು ಯುದ್ಧಗಳನ್ನು ಕಂಡಿಲ್ಲ? ಎಷ್ಟು ಯುದ್ಧಗಳ ನಂತರ ಅದೆಷ್ಟು ಮಕ್ಕಳು ಅಪ್ಪ ಅಮ್ಮಂದಿರನ್ನು ಕಳೆದುಕೊಂಡಿಲ್ಲ? [...]