November 20, 2008

ಅಂತೂ ಇಂತೂ ಕತೆ ಬಂತು!

`ಕಳ್ಳಕುಳ್ಳ’ ಬ್ಲ್ಯಾಗ್‌ನ ಸಹವರ್ತಿ ಚೇತನ್‌ ನಾಡಿಗೇರ್‌ ಹಿಂದೊಮ್ಮೆ ಇದೇ ಬ್ಲ್ಯಾಗ್‌ನಲ್ಲಿ `ನೀನಾನಾದ್ರೆ ನಾನೀನೇನಾ’ ಎಂಬ ಕತೆಯೊಂದನ್ನು ಬರೆದಿದ್ದರು. ಕತೆ ಬರೆಯುವ ಸಾಮರ್ಥ್ಯ ಇದ್ದೂ ಬರೆಯದ ವ್ಯಕ್ತಿಗಳಲ್ಲಿ ಚೇತನ್‌ ಒಬ್ಬರು. ಅನೇಕ ಕತೆಯ ಎಳೆಯನ್ನು ತಮ್ಮ ಸ್ನೇಹಿತರ ಬಳಿ ಆಗಾಗ ಹೇಳುತ್ತಾ, `ಬರೆದುಬಿಡುತ್ತೇನೆ, ಬರೆದೇಬಿಡುತ್ತೇನೆ’ ಎಂದು ಹೆದರಿಸುವ ಇವರು, ಇತ್ತೀಚೆಗೆ ಹಾಗೇ ಹೇಳಿ, ಹೆದರಿಸಿ ಅನಂತರ ಕತೆಯೊಂದನ್ನು ಬರೆದುಕೊಂಡೇ ಬಂದು ಅಚ್ಚರಿ ಮೂಡಿಸಿದ್ದಾರೆ.
ಈ ಬ್ಲಾಗ್‌ನ `ತಿಳಿಯ ಹೇಳುವೆ ಇಷ್ಟಕತೆಯನು’ ಮಾಲಿಕೆಯ ಮೊದಲ ಕತೆಯಾಗಿ ಚೇತನ್‌ಬರೆದ `ಗುರುವಿನ ಗುಲಾಮನಾಗುವತನಕ’ವನ್ನು ಪ್ರಕಟಿಸಲಾಗುತ್ತದೆ. [...]