November 28, 2008

ತೊಳೆಯಲಿ ರಕ್ತ, ತೊಡೆಯಲಿ ಕಣ್ಣೀರು

ಸಾಮಾನ್ಯ ಜನರ ಸಾವು, ಕಮಾಂಡೋಗಳ ವೀರ ಮರಣ ಮತ್ತು ಆತಂಕವಾದಿಗಳ ಹತ್ಯೆ.
`ಮೂರು ವರ್ಗ’ಗಳಾಗಿ ಹೀಗೆ ನಾವು ಸಾವನ್ನು ವಿಂಗಡಿಸಿ ನೋಡುತ್ತಿದ್ದರೂ ಮುಂಬಯಿಯಲ್ಲಿ ಎರಡೂವರೆ ದಿನಗಳ ಕಾಲ ನಡೆದ ಭಯೋತ್ಪಾದಕ ಕೃತ್ಯದಲ್ಲಿ ಘಟಿಸಿದ ಎಲ್ಲಾ ಸಾವೂ ಒಂದೇ. ನಿಂತಿದ್ದು ಉಸಿರು, ಸ್ತಬವಾಗಿದ್ದು ಎದೆಬಡಿತ, ಚೆಲ್ಲಿದ್ದು ರಕ್ತ, ಮುಚ್ಚಿದ್ದು ಕಣ್ಣು. ಆತಂಕವಾದಿಗಳ ಹತ್ಯೆ ಆ ಕ್ಷಣಕ್ಕೆ ಮಾನ್ಯವಾದರೂ ವ್ಯಕ್ತಿಯನ್ನು ಆವರಿಸಿಕೊಳ್ಳುತ್ತಾ ವ್ಯಾಪಿಸುತ್ತಿರುವ `ಆತಂಕವಾದಿತನ’ದ ಹತ್ಯೆಯಿಂದ ಮಾತ್ರ ಬಹುಶಃ ಎಲ್ಲವೂ ಸರಿಯಾಗಲು ಸಾಧ್ಯ.
ಈವರೆಗೆ ನೂರರೊಳಗೆ ಲೆಕ್ಕಕ್ಕೆ ಸಿಗುತ್ತಿದ್ದ ಭಯೋತ್ಪಾದಕ ಸಾವಿನ ಸಂಖ್ಯೆ [...]