ಪ್ರತಿ ಸಲವೂ ಹೊಸ ವರ್ಷ ಬಂದರೆ ಸಾಕು ಎನಿಸುತ್ತದೆ. ಹಳೆ ವರ್ಷ ಹೋದರೆ ಸಾಕು ಎನಿಸುತ್ತದೆ. ಹೊಸ ವರ್ಷವೆಂದರೆ ಹೊಸ ಭರವಸೆ, ಹೊಸ ನಿರೀಕ್ಷೆ, ಕಾತರದ ಕಣ್ಣುಗಳು. ಪ್ರತಿ ವರ್ಷ ಕಳೆಯುವಾಗಲೂ ಆ ವರ್ಷ `ಸಾಕಪ್ಪಾ’ ಎನಿಸಿರುತ್ತದೆ, ಅಯ್ಯೋ ಈ ವರ್ಷದಷ್ಟು ಕೆಟ್ಟದಾಗಿ ಯಾವುದೂ ಇರಲಿಲ್ಲ ಎಂಬ ಭ್ರಮೆ ಮೂಡುತ್ತದೆ. ಅಂದರೆ ಮನೆಯ ಅಜ್ಜಿಯಂತೆ ಆಕೆ ಯಾರಿಗೂ ಬೇಡ. ಹೊಸ ವರ್ಷ ಮನೆಗೆ ಬರುತ್ತಿರುವ ಹೊಸ ಹೆಣ್ಣಂತೆ, ಎಲ್ಲರಿಗೂ ಕುತೂಹಲ.
ಗೋಡೆಯ ಮೇಲೆ ಕ್ಯಾಲೆಂಡರ್ ಬದಲಾಗಿ, ಸಹಿ ಕೆಳಗೆ [...]
Entries from December 2008
December 30, 2008
ಅವಳು ಹೊರಗೆ, ಇವಳು ಬಳಿಗೆ
December 27, 2008
ಕಳೆದ ರಾತ್ರಿ ಕಂಡ ಕೆಟ್ಟ ಕನಸು
(ಧರ್ಮಾಂಧತೆಗೆ ಬಲಿಯಾದ ಜಗತ್ತಿನ ಎಲ್ಲಾ ಅಮಾಯಕರಿಗೆ ಮಿಡಿಯುವ ಬರಹ)
ತುಂಬ ದಿನಗಳಿಂದ ನೋಡಬೇಕೆಂದು ಅಂದುಕೊಂಡರೂ ನೋಡಲಾಗದೇ ಉಳಿದು ಹೋಗಿತ್ತು. ಅದು `ಪರ್ಜಾನಿಯಾ’ ಎಂಬ ಚಿತ್ರ.ಅಹ್ಮದಾಬಾದ್‌ನ ಗುಲ್ಬರ್ಗಾ ಕಾಲೋನಿಯಲ್ಲಿ ನಡೆದ ನಿಜ ಘಟನೆ, ಆ ಘಟನೆಯಲ್ಲಿ ಕಾಣೆಯಾದ ಬಾಲಕನೊಬ್ಬನ ಕತೆ ಇದು. ಬಹುಶಃ ತುಂಬ ಚರ್ಚೆಯಾದ, ತುಂಬ ಆಕ್ಷೇಪಗಳಿಗೆ ಒಳಗಾದ ಚಿತ್ರ ಅದು. ಯಾವುದೋ ಸಿಡಿ ಸೆಂಟರ್‌ನಿಂದ ಇದರ ವಿಸಿಡಿ ಕೊಂಡು ತಂದು ನೋಡತೊಡಗಿದಾಗ ಗೊತ್ತಾಯಿತು, ಅದು ಅಂಥ ದುಃಸ್ವಪ್ನ ಅಂತ ನಾನು ಅಂದುಕೊಂಡಿರಲೇ ಇಲ್ಲ. ನೋಡು ನೋಡುತ್ತಾ ಕೈ [...]
December 23, 2008
ಚಳಿಗಾಳಿ ಸಹಿ ಹಾಕಿದೆ ಮನಸಿನಲಿ…
ಈ ಚಳಿ ಯಾಕಾಗಿದೆ, ಏನು ನಿನ್ನ ಚಳಿಯ ಲೀಲೆ, ಚಳಿಗಾಳಿ, ಚಳಿಗಾಳಿ ಸಹಿ ಹಾಕಿದೆ ಮನಸಿನಲಿ…
ಹೀಗೆ ನಮ್ಮ ಜನಪ್ರಿಯ ಚಿತ್ರಗೀತೆಗಳನ್ನೆಲ್ಲಾ ಬದಲಿಸಿಕೊಂಡು ಹಾಡುವಂತೆ, ನಡುಗುತ್ತಾ ಮುದುರುವಂತೆ ಈ ಸಲ ಚಳಿಗಾಲ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. `ಗರಿಮುದುರು ಮಲಗಿದ್ದ ಹಕ್ಕಿಗೂಡುಗಳಲ್ಲಿ ಇರುಳು ಹೊಂಗನಸೂಡಿ ಸಾಗುತ್ತಿತ್ತು’ ಎಂಬ ಎಸ್‌ವಿ ಪರಮೇಶ್ವರ ಭಟ್ಟರ ಸಾಲುಗಳನ್ನು ಕೇಳುತ್ತಿದ್ದರೆ ನಮಗೆಲ್ಲಾ ಚಳಿಯ ಈ ದಿನಗಳೇ ನೆನಪಾಗುತ್ತವೆ.
ಕಿವಿಗೊಂದು ಮಫ್ಲರ್, ಮೈಗೆ ಸ್ವೆಟರ್, ಕಾಲಿಗೆ ಸಾಕ್ಸ್, ಆಗಾಗ ಉಜ್ಜಿ ಉಜ್ಜಿ ಕೈಬಿಸಿ ಮಾಡಿಕೊಳ್ಳುವ ಅಗತ್ಯ, ಬೆಂಕಿ ಕಂಡರೆ, ಬಿಸಿಲು [...]
December 22, 2008
ಕೈಗೆ ಬಂದೂಕು ಕೊಡದಿರಲಿ ದೇವರು
ಭಯೋತ್ಪಾದನೆ ಮೂಲೋತ್ಪಾಟನೆಗೆ ಹಾಗಾದರೆ ಕದನವೊಂದೇ ದಾರಿಯೇ? ಈವರೆಗೆ ಜಗತ್ತಲ್ಲಾದ ಸಮರ ಯಾವತ್ತೂ ಅಂತಿಮವಾಗಿ ಯಾವೊಂದು ರಾಷ್ಟ್ರಕ್ಕೂ ಶಾಶ್ವತ ಸಂತೋಷವನ್ನು, ಪರಿಹಾರವನ್ನು ಕಂಡುಕೊಟ್ಟಿಲ್ಲ. ಪರಸ್ಪರ ಸೇಡು ತೀರಿಸಿಕೊಳ್ಳಲು ಮಾತ್ರ ಅದು ಬಳಕೆಯಾಗಿದೆ. ಸಮರ ಬೇಡ ಎಂದೇ ಯಾವತ್ತಿಗೂ ಜನಸಾಮಾನ್ಯರೆಲ್ಲರೂ ಪ್ರತಿಪಾದಿಸಿದರು. `ಕೈಯ್ಯಲ್ಲಿ ಬಂದೂಕು ಕೊಡುವ ದೇವರು ಹಿಂದೂಗಳಿಗೂ ಬೇಡ, ಮುಸಲ್ಮಾನರಿಗೂ ಬೇಡ’ ಎಂದು ಮೊನ್ನೆ ಡಾ. ಯು ಆರ್ ಅನಂತಮೂರ್ತಿ ಹೇಳಿದರು. ಕೈ ಕೈ ಮಿಲಾಯಿಸಿ, ಸಾವು ತಂದುಕೊಂಡ ಯಾವುದೆ ರಾಷ್ಟ್ರವೂ ಮತ್ತೊಮ್ಮೆ ಸಮರವನ್ನು ಬಯಸುವುದಿಲ್ಲ. ಯಾಕೆಂದರೆ ಕದನದ [...]
December 19, 2008
ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ
ನಿಜವಾಗಿಯೂ ಗೆಳೆತನ ಎಂದರೇನು? ಒಟ್ಟಿಗೆ ತಿರುಗಾಡುವುದೇ, ಐಸ್‌ಕ್ರೀಮ್ ತಿನ್ನುವುದೇ, ನೋಟ್ಸ್ ಕೇಳುವುದೇ, ದುಬಾರಿ ಉಡುಗೊರೆ ಕೊಡುವುದೇ? ಸ್ನೇಹ ಇರುವುದು ಪ್ರೀತಿಯಲ್ಲಾ, ನಿಕಟ ಒಡನಾಟದಲ್ಲಾ, ತ್ಯಾಗದಲ್ಲಾ, ಸ್ವಾರ್ಥದಲ್ಲಾ ನಿಃಸ್ವಾರ್ಥದಲ್ಲಾ? ಈ ಮಾತಿಗೆ ಕಾಲಮಾನಕ್ಕೊಂದು ವ್ಯಾಖ್ಯೆ ಬಂದುಹೋಗಿವೆ. ಸ್ನೇಹದಲ್ಲಿ ನಿಸ್ವಾರ್ಥ ಇರಬೇಕು ಎಂಬ ಹಳಸಲು ಮಾತುಗಳು ಸದಾ ನಮ್ಮ ನಡುವೆ ಹಾದು ಹೋಗಿವೆ. ಆದರೆ ಗೆಳೆತನ ಈ ಎಲ್ಲಾ ಹಂಗನ್ನೂ ತೊರೆದು ಎರಡು ಜೀವಗಳ ಮಧ್ಯೆ ಲಿಂಗ, ವಯಸ್ಸು, ಜಾತಿ, ವರ್ಚಸ್ತು, ಅಂತಸ್ತು, ಮತಾತೀತವಾಗಿ ಹುಟ್ಟಿಕೊಂಡಿದೆ. ಸ್ನೇಹ ಮತ್ತೊಬ್ಬನನ್ನು ಇತ್ಯಾತ್ಮಕ(ಪಾಸಿಟಿವ್)ವಾಗಿ [...]
December 15, 2008
ದೇವಿಸೂಕ್ತ: ಸಂಧ್ಯೆಯ ವ್ಯಕ್ತ, ಅವ್ಯಕ್ತ
ಸಂಧ್ಯಾದೇವಿ. ಐವತ್ತರ ಆಸುಪಾಸಿನಲ್ಲಿ ತಮ್ಮ `ಮಾತು ಚಿಟ್ಟೆ, ಬೆಂಕಿ ಬೆರಳು, ಮುರಿದ ಮುಳ್ಳಿನಂತೆ ಜ್ಞಾನ’ ಎಂಬ ಕವಿತೆಗಳ ದೊಡ್ಡ ಹಣತೆ ಹಿಡಿದು ಕನ್ನಡ ಸಾಹಿತ್ಯ ಲೋಕವನ್ನು ಥಟ್ಟನೆ ಬೆಳಗಿಸಿದವರು.
ತಾವಿಬ್ಬ ಸ್ತ್ರೀಯಾಗಿ ಸ್ತ್ರೀಪರ ಕವಿತೆಯನ್ನೇ ಬರೆಯಬೇಕೆಂಬ ಹಠವಿಲ್ಲದ, ಹೆಣ್ಣು ಮಗಳ ಕವಿತೆಯಾದ ಕಾರಣ `ಸ್ವಲ್ಪ ರೋಚಕವಾಗಿರೋಣ, ಜನ ಓದುತ್ತಾರೆ’ ಎಂಬ ಲೋಲುಪತೆ ಇಲ್ಲದ, ಕವಿ ಎಂದ ಕೂಡಲೇ ಘೋಷಣೆ ನಡೆಯಲಿ ಎಂಬ ಹಪಾಹಪಿ ಇಲ್ಲದ, ಕನ್ನಡದ ಅಪರೂಪದ ಕವಯಿತ್ರಿ ಸಂಧ್ಯಾದೇವಿ. `ನಾದದ ಕಡಲಲ್ಲಿ ತೇಲುವ ನಾನೊಂದು ಹಡಗು’ ಎಂದು [...]
December 14, 2008
ದಿವಂಗತ ಶ್ರೀಸಾಮಾನ್ಯ!
ಸಿದಾಂತಗಳ ಕತ್ತಿಗೆ ಶ್ರೀಸಾಮಾನ್ಯ ಕತ್ತು ಕತ್ತರಿಸಿಹೋಗುತ್ತಿದೆ. ಭಯೋತ್ಪಾದಕ ದಾಳಿ, ನಕ್ಸಲೀಯ ವಾದ, ಎಲ್‌ಟಿಟಿಇ- ಎಂಬ ಹೆಸರಿನ, ರಕ್ತ ಹರಿಸುವುದೇ ಉದ್ದೇಶವಾದ ನಾನಾ ಸಿದಾಂತಗಳ ಜಗತ್ತಿನಲ್ಲಿ ಒಬ್ಬ ಮಾಮೂಲಿ ಮನುಷ್ಯ ಈಗ ನೆಮ್ಮದಿಯಾಗಿ ನಿದ್ರಿಸಲಾರ. ಹೊರಗೆ ಹೋದ ಗಂಡ, ಹೆಂಡತಿ, ಶಾಲೆಗೆ ಹೋದ ಕಂದಮ್ಮಗಳು ಸುರಕ್ಷಿತವಾಗಿ ವಾಪಾಸು ಬರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. `ಕೊನೆಗೊಂಡಿತೋ ಓರ್ವೋರ್ವರ ಗರ್ವದ ಕಾಲ, ಇದು ಸರ್ವರ ಕಾಲ’ ಎಂದು ಕುವೆಂಪು `ಶ್ರೀಸಾಮಾನ್ಯಗೀತೆ’ಯನ್ನು ಬರೆದರು. ಆದರೆ ಶ್ರೀಸಾಮಾನ್ಯನ ಗೀತೆ ಇದೀಗ ವಿಷಾದ ರಾಗದಲ್ಲೇ ಕೇಳಿಬರಲು [...]
December 9, 2008
`ನನ್ನಪ್ಪ ಸಾಯದೇ ಇರುತ್ತಿದ್ದರೆ…’
ಮುಂಬೈಯ ಎಷ್ಟು ಮನೆಗಳು ಯಜಮಾನರನ್ನು, ಯಜಮಾನರು ತಮ್ಮ ಹೆಂಗಸರನ್ನು, ಹೆಂಗಸರು ಮಕ್ಕಳನ್ನು, ಮಕ್ಕಳು ಅಪ್ಪ ಅಮ್ಮಂದಿರನ್ನು, ಅಮ್ಮಂದಿರು ಬಂಧು ಬಳಗವನ್ನು ಕಳೆದುಕೊಂಡಿವೆಯೋ- ಗೊತ್ತಿಲ್ಲ. ನಾವು ಸಿದಾಂತವನ್ನು, ನೀತಿಯನ್ನು, ಕ್ರೌರ್ಯವನ್ನೂ ಮಾತಾಡುತ್ತಾ, ಲೇಸ್ ತಿನ್ನುತ್ತಾ ಟೀವಿ ನೋಡುತ್ತಾ ಕುಳಿತಿದ್ದೇವೆ.
ಬ್ಲಾಗ್‌ಗೆ ಯಾವುದೇ ಹೊಸ ವಿಚಾರವನ್ನೂ ಹಾಕಲು ಮನಸ್ಸಾಗುತ್ತಿಲ್ಲ. ಏನೇ ವಿಚಾರ ಬಂದಾಗಲೂ ಮತ್ತೆ ಹೊಗೆಯಾಡುತ್ತಿರುವ ಮುಂಬೈ, ಓಡುತ್ತಿರುವ ಭಯಭೀತ ಕಾಲುಗಳು, ಸಂದೀಪ್ ಉನ್ನಿಕೃಷ್ಣನ್, ಆಸ್ಪತ್ರೆಯ ಹೆಣಗಳು, ಹರಿದುಕೊಂಡು ಬಿದ್ದ ಚಪ್ಪಲಿಗಳು ಕಣ್ಣಿಗೆ ಕಟ್ಟುತ್ತಿವೆ.
ಹಿಂದೆ ಅಮೆರಿಕಾ ಅವಳಿ ಕಟ್ಟದ ಮೇಲೆ ಆದ [...]
December 6, 2008
ಕಾಪಾಡು ಶ್ರೀ ಡಿಸೆಂಬರ್ ಮಾರಾಯನೇ
ಈ ಡಿಸೆಂಬರ್ ತಿಂಗಳು ಯಾರಿಗೂ ಸುಖಕರವಾಗಿಲ್ಲ. ಆರ್ಥಿಕ ಕುಸಿತದಿಂದ ಕೆಲಸ ಕಳೆದುಕೊಳ್ಳುವ ಭಯದಲ್ಲಿ ಇಡೀ ದೇಶ ಬದುಕುತ್ತಿದೆ. ಭಯೋತ್ಪಾದಕ ಕೃತ್ಯಗಳಿಂದಾಗಿ ಯಾರೂ ನೆಮ್ಮದಿಯಾಗಿ ಆಫೀಸಿಗೆ, ಸಿನಿಮಾಕ್ಕೆ, ಶಾಪಿಂಗ್‌ಗೆ ಹೋಗುತ್ತಿಲ್ಲ. ಚಿತ್ರಮಂದಿರಗಳಿಗೆ, ಮಾಲ್‌ಗಳಿಗೆ ವ್ಯಾಪಾರವಿಲ್ಲ. ಜನ ಸಂಚಾರದಲ್ಲಿ ಒಂದು ಬಗೆಯ ದುಗುಡ.
ಎಲ್ಲಕ್ಕೂ ಮುಖ್ಯವಾಗಿ ಡಿಸೆಂಬರ್ ಮಹಾ ಚಳಿಯ ತಿಂಗಳು. ಬೆಂಗಳೂರಿನಲ್ಲಿ ಇರುವಷ್ಟು ಚಳಿ ಯಾವ ಮಲೆನಾಡಲ್ಲೂ ಇದ್ದಂತಿಲ್ಲ. ಬೆಳಿಗ್ಗೆ ಎದ್ದರೆ ಚಳಿಯಿಂದ ಹೊರ ಬರುವುದಕ್ಕೆ ಎರಡು- ಮೂರು ತಾಸಾದರೂ ಬೇಕು. ಆಮೇಲೆ ಬಿಸಿಲಿಗೆ ಮೈ, ಕೈ ಒಡೆದುಕೊಂಡು ಇಡೀ [...]
December 1, 2008
ಇದೀಗ ಬಂದ ಪ್ರತಿಕ್ರಿಯೆ
ಪ್ರಿಯ ವಿಕಾಸ,
ಮುಂಬೈ ದುಷ್ಕೃತ್ಯದ ಹಿನ್ನೆಲೆಯಲ್ಲಿ ಹೃದಯದಿಂದ ಮಾತನಾಡಿದ್ದೀರಿ. ಹಾಗೆಂದೆ ನನ್ನ ಹೃದಯವೂ ಹಗರಾಗಿದೆ, ಆತಂಕದ ಸಂದರ್ಭದಲ್ಲಿ ಅಪ್ಪಿಕೊಳ್ಳುವಷ್ಟು. ಆ ಎರಡು ದಿನ ಒಳಗೊಳಗೆ ಅತ್ತವನು ನಾನು. ಇಸ್ಲಾಮಿನ ಹೆಸರಿನಲ್ಲಿ ಮನುಷ್ಯವಿರೋಧಿ ರಕ್ಕಸರು ಮಾಡಿದ ಹೇಯ ಕೃತ್ಯವದು. ಅವರು ತಮ್ಮನ್ನು ಇಸ್ಲಾಮಿಯರು ಎಂದು ಭ್ರಮಿಸಿಕೊಂಡಿದ್ದಾರೆ. ಅವರಷ್ಟೆ ಅಲ್ಲಾ, ಹಾಗೇ ಯೋಚಿಸುವ ಮತಾಂಧರು ಆಳದಲ್ಲಿ ಸೈತಾನರೇ ಆಗಿರುತ್ತಾರೆ. ಇಂತಹ ಕಲ್ಪಿತ
ಜೆಹಾದ್‌ನಲ್ಲಿ ಸತ್ತು ಸ್ವರ್ಗ ಸೇರುತ್ತೇನೆಂಬ ಭ್ರಮೆ ಅವರಿಗಿದ್ದರೆ ನಂಬದಿದ್ದರೂ ನಾನು ಹೇಳುತ್ತೇನೆ. ಅವರು ನರಕಕ್ಕೆ ಮಾತ್ರ ಯೋಗ್ಯರು. ಧರ್ಮದಮಲಿನ ಮತ್ತನ್ನು [...]