ಭಯೋತ್ಪಾದನೆ ಮೂಲೋತ್ಪಾಟನೆಗೆ ಹಾಗಾದರೆ ಕದನವೊಂದೇ ದಾರಿಯೇ? ಈವರೆಗೆ ಜಗತ್ತಲ್ಲಾದ ಸಮರ ಯಾವತ್ತೂ ಅಂತಿಮವಾಗಿ ಯಾವೊಂದು ರಾಷ್ಟ್ರಕ್ಕೂ ಶಾಶ್ವತ ಸಂತೋಷವನ್ನು, ಪರಿಹಾರವನ್ನು ಕಂಡುಕೊಟ್ಟಿಲ್ಲ. ಪರಸ್ಪರ ಸೇಡು ತೀರಿಸಿಕೊಳ್ಳಲು ಮಾತ್ರ ಅದು ಬಳಕೆಯಾಗಿದೆ. ಸಮರ ಬೇಡ ಎಂದೇ ಯಾವತ್ತಿಗೂ ಜನಸಾಮಾನ್ಯರೆಲ್ಲರೂ ಪ್ರತಿಪಾದಿಸಿದರು. `ಕೈಯ್ಯಲ್ಲಿ ಬಂದೂಕು ಕೊಡುವ ದೇವರು ಹಿಂದೂಗಳಿಗೂ ಬೇಡ, ಮುಸಲ್ಮಾನರಿಗೂ ಬೇಡ’ ಎಂದು ಮೊನ್ನೆ ಡಾ. ಯು ಆರ್ ಅನಂತಮೂರ್ತಿ ಹೇಳಿದರು. ಕೈ ಕೈ ಮಿಲಾಯಿಸಿ, ಸಾವು ತಂದುಕೊಂಡ ಯಾವುದೆ ರಾಷ್ಟ್ರವೂ ಮತ್ತೊಮ್ಮೆ ಸಮರವನ್ನು ಬಯಸುವುದಿಲ್ಲ. ಯಾಕೆಂದರೆ ಕದನದ [...]