ಅಮ್ಮಂದಿರ ದಿನ ಅಂತ ಮೊನ್ನೆ ವೆಬ್ ಸೈಟ್ ಒಂದರಲ್ಲಿ ಬಾಲಿವುಡ್ ನ ಅಮ್ಮಂದಿರ ಇನ್ನೂ ಮಸುಕದ ಗ್ಲಾಮರ್ ಬಗ್ಗೆ ಫೋಟೋ ಸಹಿತ ಒಂದು ಸಾಲಿನ ಬರೆಹ ಇತ್ತು. ಅಮ್ಮಂದಿರ ದಿನಕ್ಕೆ ಮಾಧ್ಯಮಗಳೆಲ್ಲಾ ಏನೇನು ಮಾಡಲು ಸಾಧ್ಯವೋ ಅದನ್ನೆಲ್ಲಾ ಮಾಡಲು ಸಿದ್ಧವಾಗುತ್ತಿವೆ. ಈ ಭಾನುವಾರ ಎಲ್ಲಾ ವ್ಯಾಪಾರ ಮಳಿಗೆ, ಎಲ್ಲಾ ಹೊಟೇಲ್, ಎಲ್ಲಾ ಮಾಲ್ ಗಳು ಶುಭಾಶಯಗಳಿಂದ, ಸಂಭ್ರಮಗಳಿಂದ ತುಂಬುತ್ತವೆ, ಮನೆ ಮನೆಯಲಿ ದೀಪ ಉರಿಸಿ, ಹೊತ್ತು ಹೊತ್ತಿಗೆ ಅನ್ನ ಉಣಿಸಿದ ಅಮ್ಮನೆಂಬ ಕೈಗಳಿಗೆ ಹೂಗೊಂಚಲಿನ ಶುಭಕಾಮನೆ. ಆದರೆ [...]